ವಿಡಿಯೋ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ಗುರುವಾರ ರಾತ್ರಿ ಗಲಾಟೆ ನಡೆದಿದೆ.
ಈ ವೇಳೆ ನಾಪತ್ತೆಯಾಗಿದ್ದ ಒಡಿಶಾದ ಬಿಬಾಶ್ (26) ಎಂಬ ಪ್ರವಾಸಿಗನ ಮೃತದೇಹ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.
ತುಂಗಾಭದ್ರ ಎಡದಂಡೆ ಕಾಲುವೆ ಪಕ್ಕ ಇಸ್ರೇಲ್, ಅಮೆರಿಕ, ಒಡಿಶಾ, ಮಹಾರಾಷ್ಟ್ರ ಮತ್ತು ಸ್ಥಳೀಯ ಹೋಂ ಸ್ಟೇನ ಒಡತಿಯೊಬ್ಬರು ಗಿಟಾರ್ ಬಾರಿಸುತ್ತ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು.
ಈ ವೇಳೆ ದುಷ್ಕರ್ಮಿಗಳು ಇವರ ಮೇಲೆ ಹಲ್ಲೆ ಮಾಡಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement