ವಿಡಿಯೋ
ಹಮಾಸ್ ಉಗ್ರಗಾಮಿ ಸಂಘಟನೆಯನ್ನು ಬೆಂಬಲಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿದ ಆರೋಪದ ಮೇಲೆ ಭಾರತೀಯ ಮೂಲದ ವಿದ್ಯಾರ್ಥಿನಿ ವೀಸಾ ರದ್ದಾಗಿದೆ.
ಕೊಲಂಬಿಯಾ ವಿಶ್ವವಿದ್ಯಾಲಯದ ಭಾರತೀಯ ಮೂಲದ ವಿದ್ಯಾರ್ಥಿನಿ ರಂಜನಿ ಶ್ರೀನಿವಾಸನ್, ಡಾಕ್ಟರೇಟ್ ವಿದ್ಯಾರ್ಥಿಯಾಗಿ ಎಫ್-1 ವಿದ್ಯಾರ್ಥಿ ವೀಸಾದಲ್ಲಿ ಅಮೆರಿಕಕ್ಕೆ ಹೋಗಿದ್ದರು.
ನಂತರ ಭಯೋತ್ಪಾದಕ ಸಂಘಟನೆಯಾದ ಹಮಾಸ್ ನ್ನು ಬೆಂಬಲಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ಗೃಹ ಭದ್ರತಾ ಇಲಾಖೆ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.
ಮಾರ್ಚ್ 5 ರಂದು ವಿದೇಶಾಂಗ ಇಲಾಖೆ ಅವರ ವೀಸಾವನ್ನು ರದ್ದುಗೊಳಿಸಿತ್ತು.
ರಂಜನಿ ಶ್ರೀನಿವಾಸನ್ ಅವರು ಸ್ವಯಂ ಗಡಿಪಾರುಗೊಳ್ಳಲು ಮಾರ್ಚ್ 11 ರಂದು ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ (CBP)ಹೋಮ್ ಅಪ್ಲಿಕೇಶನ್ ಬಳಸಿದ ವೀಡಿಯೊ ಕಂಡುಬಂದಿವೆ.
Advertisement