Watch | ಸ್ಪೀಕರ್ ಹುದ್ದೆಗೆ ಅಗೌರವ: 18 ಬಿಜೆಪಿ ಶಾಸಕರು 6 ತಿಂಗಳು ಅಮಾನತು; ಯುಟಿ ಖಾದರ್ ಆದೇಶ

ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ ಕಲಾಪದಲ್ಲಿ ಶುಕ್ರವಾರ ಹೈಡ್ರಾಮಾಕ್ಕೆ ಕಾರಣವಾಯಿತು.

ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾಯಿತು. ಇದೇ ವೇಳೆ ಬಿಜೆಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಅಲ್ಲದೆ, ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್ ಮೇಲೆ ಎಸೆಯುತ್ತಾ, 'ಹನಿಟ್ರ್ಯಾಪ್ ಸರ್ಕಾರ' ಎಂದು ಘೋಷಣೆಗಳನ್ನು ಕೂಗಿದರು.

ಇದರಿಂದಾಗಿ ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com