ವಿಡಿಯೋ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಶೋಪಿಯಾನ್ ಜಿಲ್ಲೆಯ ಶುಕ್ರೂ ಅರಣ್ಯ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಹಾಗೂ ಸಿಆರ್‌ಪಿಎಫ್ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದವು.
ಭದ್ರತಾ ಪಡೆಗಳು ಮಂಗಳವಾರ ಶಂಕಿತರು ಆಡಗಿರುವ ಸ್ಥಳಕ್ಕೆ ತೆರಳುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
ಈ ವೇಳೆ ಉಗ್ರರ ದಾಳಿಗೆ ಭದ್ರತಾ ಪಡೆಗಳು ದಿಟ್ಟ ಉತ್ತರ ನೀಡಿದ್ದು, ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಬದಲಾಯಿಸಿ, ಸ್ಥಳವನ್ನು ಸುತ್ತುವರೆದಿದ್ದಾರೆ.
ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದು, ಅವರನ್ನು ಶಾಹಿದ್ ಅಹ್ಮದ್ ಕುಟ್ಟೇ (LeT/TRF), ಅದ್ನಾನ್ ಶಾಫಿ (LeT/TRF) ಎಂದು ಗುರುತಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement