Watch | ನಾನು ಒಬ್ಬ ಹೆಮ್ಮೆಯ ಭಾರತೀಯನಾಗಿ ಅಪರೇಷನ್ ಸಿಂಧೂರ್ ಬಗ್ಗೆ ಹೇಳಿಕೆ ನೀಡಿದ್ದೇನೆ...

ಭಾರತ-ಪಾಕಿಸ್ತಾನ ಸಂಘರ್ಷದ ಕುರಿತು ತಮ್ಮ ಹೇಳಿಕೆಗಳನ್ನು ನಾನು ಒಬ್ಬ ಭಾರತೀಯ ಎಂದು ವೈಯಕ್ತಿಕವಾಗಿ ಹೇಳಿದ್ದೇನೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಸ್ಪಷ್ಟಪಡಿಸಿದ್ದಾರೆ.

ಕೇರಳದ ತಿರುವನಂತಪುರಂನಲ್ಲಿ ಸಂಸದ ಶಶಿ ತರೂರ್ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಂಘರ್ಷದ ಕುರಿತು ಪದೇ ಪದೇ ಹೇಳಿಕೆ ನೀಡುವ ಮೂಲಕ ಶಶಿ ತರೂರ್ ಪಕ್ಷದ ಲಕ್ಷ್ಮಣ ರೇಖೆ ದಾಟಿದ್ದಾರೆ ಎಂದು ಕಾಂಗ್ರೆಸ್ ನಾಯಕರ ಒಂದು ವರ್ಗ ಭಾವಿಸಿದೆ ಎಂದು ವರದಿಯಾಗಿದೆ.

ಆ ಬಗ್ಗೆ ಪಕ್ಷದಿಂದ ನನಗೆ ಯಾವುದೇ ಸಂವಹನ ಬಂದಿಲ್ಲ; ನಾನು ನೋಡುತ್ತಿರುವುದು ಮಾಧ್ಯಮ ವರದಿಗಳು ಮಾತ್ರ ಎಂದು ತರೂರ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com