Watch | ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ಬೂಕರ್ ಪ್ರಶಸ್ತಿ

ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ ಸಿಕ್ಕಿದೆ.

ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ. ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್‌ (ಅಂದಾಜು 57.28 ಲಕ್ಷ ರೂ.) ಒಳಗೊಂಡಿದೆ.

1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com