Watch | ಮಲ್ಲಿಕಾರ್ಜುನ ಖರ್ಗೆಗೂ ಪಪ್ಪು ಮನಸ್ಥಿತಿ ಬಂದಿದೆ: ಪ್ರತಾಪ್ ಸಿಂಹ ವಾಗ್ದಾಳಿ

ಪಾಕಿಸ್ತಾನದ ವಿರುದ್ಧ ಭಾರತದ ಮಿಲಿಟರಿ ಕಾರ್ಯಾಚರಣೆಯನ್ನು "ಚುಟ್-ಪುಟ್ ಯುದ್ಧ" ಎಂದು ಹೇಳಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಹೇಳಿಕೆಯು ಸಶಸ್ತ್ರ ಪಡೆಗಳಿಗೆ ಮಾಡಿದ ಅವಮಾನ ಮತ್ತು ಕಾಂಗ್ರೆಸ್ ಪಕ್ಷದ "ಮನಸ್ಥಿತಿ"ಯ ಪ್ರತಿಬಿಂಬ ಎಂದು ಹಲವಾರು ನಾಯಕರು ಟೀಕಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಗೂ ಪಪ್ಪು ಮನಸ್ಥಿತಿ ಬಂದಿದೆ ಎಂದು ಪ್ರತಾಪ್‌ ಸಿಂಹ ಲೇವಡಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳನ್ನು ಆಚರಿಸಲು ಮಂಗಳವಾರ ಹೊಸಪೇಟೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಖರ್ಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com