ವಿಡಿಯೋ
ತಮಿಳಿನಿಂದ ಕನ್ನಡ ಹುಟ್ಟಿತು ಎಂದು ನಟ ಕಮಲ್ ಹಾಸನ್ ಅವರು ನೀಡಿರುವ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದ್ದು, ಕ್ಷಮೆಯಾಚನೆಗೆ ಕನ್ನಡಿಗರು ಪಟ್ಟು ಹಿಡಿದಿದ್ದಾರೆ.
ಈಮಧ್ಯೆ, ತಪ್ಪಿಲ್ಲದಿದ್ದಾಗ ಕ್ಷಮೆಯಾಚಿಸುವುದಿಲ್ಲ ಎಂದು ನಟ ಕಮಲ್ ಹಾಸನ್ ಅವರು ಪುನರುಚ್ಛರಿಸಿದ್ದಾರೆ.
ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ.
ಕರ್ನಾಟಕ, ಆಂಧ್ರ ಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ಕುತಂತ್ರ ಹೊಂದಿರುವವರನ್ನು ಹೊರತುಪಡಿಸಿ ಯಾರೂ ಈ ಪ್ರೀತಿಯನ್ನು ಅನುಮಾನಿಸುವುದಿಲ್ಲ.
ನನಗೆ ಈ ಹಿಂದೆಯೂ ಬೆದರಿಕೆ ಹಾಕಲಾಗಿತ್ತು. ನನ್ನಿಂದ ತಪ್ಪಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ, ತಪ್ಪಿಲ್ಲ ಎಂದಾಗ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement