ವಿಡಿಯೋ
ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಈ ದುರ್ಘಟನೆಯಲ್ಲಿ, ಸುಮಾರು 45 ಮಂದಿ ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದಾರೆ.
ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯಲಾಗುತ್ತಿತ್ತು. ದುರಂತದ ಸಮಯದಲ್ಲಿ ಸುಮಾರು 20 ಮಹಿಳೆಯರು ಮತ್ತು 11 ಮಕ್ಕಳು ಬಸ್ಸಿನಲ್ಲಿದ್ದರು.
ಈ ವೇಳೆ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬಸ್ಸಿನಲ್ಲಿದ್ದ 45 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಮುಫ್ರಿಹತ್ ಎಂದು ಗುರುತಿಸಲಾದ ಸ್ಥಳದಲ್ಲಿ ಭಾರತೀಯ ಕಾಲಮಾನ ಬೆಳಗಿನ ಜಾವ 1.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement