ವಿಡಿಯೋ
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ವಿಶೇಷ ನ್ಯಾಯಮಂಡಳಿ ಸೋಮವಾರ ಮರಣದಂಡನೆ ಶಿಕ್ಷೆ ವಿಧಿಸಿದೆ.
ಕಳೆದ ವರ್ಷ ಜುಲೈನಲ್ಲಿ ಅವರ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆಗಳ ಸಂದರ್ಭದಲ್ಲಿ "ಮಾನವೀಯತೆಯ ವಿರುದ್ಧದ ಅಪರಾಧಗಳು" ಎಸಗಿದ್ದಕ್ಕಾಗಿ ಈ ಶಿಕ್ಷೆ ನೀಡಲಾಗಿದೆ.
ಕಳೆದ ವರ್ಷ ಆಗಸ್ಟ್ 5 ರಂದು ಅವರ ಸರ್ಕಾರ ಉರುಳಿದಾಗಿನಿಂದ ಭಾರತದಲ್ಲಿ ವಾಸಿಸುತ್ತಿರುವ 78 ವರ್ಷದ ಹಸೀನಾ ಅವರಿಗೆ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಶಿಕ್ಷೆ ವಿಧಿಸಿತು.
ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ. ಇದು ಗರಿಷ್ಠ ಶಿಕ್ಷೆಗೆ ಅರ್ಹವಾಗಿರುವ ಪ್ರಕರಣ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.
ಕಳೆದ ವರ್ಷ ಜುಲೈ 15 ಮತ್ತು ಆಗಸ್ಟ್ 15 ರ ನಡುವೆ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಗಳನ್ನು ಮಾರಕವಾಗಿ ಹತ್ತಿಕ್ಕುವಂತೆ ಹಸೀನಾ ನೇರ ಸೂಚನೆ ನೀಡಿದ್ದಾಗಿ ನ್ಯಾಯಾಲಯವು ಹೇಳಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement