ವಿಡಿಯೋ
Watch | ಬೆಂಗಳೂರು ಟೆಕ್ ಸಮ್ಮಿಟ್ 2025: ಸರ್ಕಾರದ ನೀತಿಗಳು ಹೂಡಿಕೆದಾರರ ಸೆಳೆಯುತ್ತಿವೆ!
ಐಟಿ-ಬಿಟಿ ಇಲಾಖೆ ವತಿಯಿಂದ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ(ಬಿಇಐಸಿ) ಆಯೋಜಿಸಲಾಗಿರುವ ಏಷ್ಯಾದ ಅತಿದೊಡ್ಡ ಟೆಕ್ ಸಮ್ಮಿಟ್ 'ಬೆಂಗಳೂರು ಟೆಕ್ ಸಮ್ಮಿಟ್ 2025' ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಸೇರಿದಂತೆ ದೇಶ ವಿದೇಶಗಳಿಂದ ಆಗಮಿಸಿದ್ದ ತಂತ್ರಜ್ಞಾನ ವಲಯದ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕವು ತಂತ್ರಜ್ಞಾನದ ಶಕ್ತಿ ಕೇಂದ್ರವಾಗಿ ಉದಯಿಸಿ ಹೊರಹೊಮ್ಮುತ್ತಿರುವುದು ಆಕಸ್ಮಿಕವಲ್ಲ, ಅದು ನಮ್ಮ ಸರ್ಕಾರದ ದೂರದೃಷ್ಟಿಯ ನೀತಿಗಳು, ಆಳವಾದ ಸಾಂಸ್ಥಿಕ ಶಕ್ತಿ ಮತ್ತು ಪ್ರತಿ ಹಂತದಲ್ಲೂ ಸೃಜನಶೀಲತೆ ಮತ್ತು ಶ್ರೇಷ್ಠತೆಯನ್ನು ಪೋಷಿಸುವ ಪರಿಸರ ವ್ಯವಸ್ಥೆಯ ಪರಿಣಾಮವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಈ ವೇಳೆ ಪ್ರತಿಪಾದಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
