ವಿಡಿಯೋ
ದುಬೈ ಏರೋ ಶೋ ವೇಳೆ ಶುಕ್ರವಾರ ಮಧ್ಯಾಹ್ನ ಭಾರತದ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ.
ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಹಾರಾಟ ನಡೆಸುತ್ತಿದ್ದ ವಿಮಾನ ನೋಡ ನೋಡುತ್ತಿದ್ದಂತೆಯೇ ಬೆಂಕಿಯುಂಡೆಯಾಗಿ ನೆಲಕ್ಕೆ ಅಪ್ಪಳಿಸಿದೆ.
ವಿಶ್ವದ ಅತಿದೊಡ್ಡ ವಾಯುಯಾನ ಪ್ರದರ್ಶನಗಳಲ್ಲಿ ಒಂದಾದ ದ್ವೈವಾರ್ಷಿಕ ದುಬೈ ಏರ್ ಶೋ ವೇಳೆ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಪೈಲಟ್ ಸಾವನ್ನಪ್ಪಿರುವುದನ್ನು ಭಾರತೀಯ ವಾಯುಪಡೆ ದೃಢಪಡಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪೈಲಟ್ ಸಾವನ್ನಪ್ಪಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement