ವಿಡಿಯೋ
ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಸಂಘರ್ಷ ನಿಭಾಯಿಸುವುದು ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಿಮಿಸಿದೆ.
ರಾಹುಲ್ ಗಾಂಧಿ ಡಿಕೆ ಶಿವಕುಮಾರ್ ಅವರಿಗೆ ಸಂಕ್ಷಿಪ್ತ ವಾಟ್ಸಾಪ್ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದು, "ದಯವಿಟ್ಟು ಕಾಯಿರಿ. ನಾನು ನಿಮಗೆ ಕರೆ ಮಾಡುತ್ತೇನೆ" ಎಂದು ಹೇಳಿರುವುದಾಗಿ ವರದಿಯಾಗಿದೆ.
ಈ ಕುರಿತು, ಡಿಸಿಎಂ ಪ್ರತಿಕ್ರಿಯಿಸಿ, "ರಾಹುಲ್ ಗಾಂಧಿ ನನಗೆ ತಿಳಿಸಿರುವ ವಿಷಯ ಮಾಧ್ಯಮಗಳ ಮುಂದೆ ಚರ್ಚಿಸಬೇಕಾದ ವಿಷಯವಲ್ಲ. ಅದರ ಬಗ್ಗೆ ನಾನು ಮಾತನಾಡುವ ಅಗತ್ಯವಿಲ್ಲ" ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement