ವಿಡಿಯೋ
ಹಾಂಗ್ ಕಾಂಗ್‌ನಲ್ಲಿ ಸಂಭವಿಸಿದ ಅತ್ಯಂತ ಭೀಕರ ಬೆಂಕಿ ದುರಂತದಲ್ಲಿ ಮೃತಪಟ್ಟ ನಾಗರಿಕರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. 279 ಜನರು ನಾಪತ್ತೆಯಾಗಿದ್ದು ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆಯಿದೆ.
ರಕ್ಷಣಾ ಕಾರ್ಯಕರ್ತರು ಇನ್ನೂ ಎತ್ತರದ ಅಪಾರ್ಟ್‌ಮೆಂಟ್ ಕಟ್ಟಡಗಳಿಂದ ನಿವಾಸಿಗಳನ್ನು ಹೊರಗೆ ತರಲು ಪ್ರಯತ್ನಿಸುತ್ತಿದ್ದಾರೆ.
ನ್ಯೂ ಟೆರಿಟರಿಗಳ ಉಪನಗರವಾದ ತೈ ಪೋ ಜಿಲ್ಲೆಯ ವಸತಿ ಸಮುಚ್ಚಯದಲ್ಲಿ ಭಾರತೀಯ ಕಾಲಮಾನ ನಿನ್ನೆ ಬುಧವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement