ವಿಡಿಯೋ
ನರೇಂದ್ರ ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಭಾರತಕ್ಕೆ ಇರುವ ದೊಡ್ಡ ಬೆದರಿಕೆ "ಪ್ರಜಾಪ್ರಭುತ್ವದ ಮೇಲಿನ ದಾಳಿ" ಎಂದು ಹೇಳಿದ್ದಾರೆ.
ಕೊಲಂಬಿಯಾದ ಇಐಎ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ಸಂವಾದದಲ್ಲಿ ರಾಹುಲ್ ಗಾಂಧಿ, ಭಾರತದಲ್ಲಿ ಹಲವು ಧರ್ಮಗಳು, ಸಂಪ್ರದಾಯಗಳು ಮತ್ತು ಭಾಷೆಗಳಿವೆ.
ಪ್ರಜಾಪ್ರಭುತ್ವ ವ್ಯವಸ್ಥೆಯು ಎಲ್ಲರಿಗೂ ಒಂದು ಸ್ಥಾನವನ್ನು ಒದಗಿಸುತ್ತದೆ. ಆದರೆ ಪ್ರಸ್ತುತ, ಪ್ರಜಾಪ್ರಭುತ್ವ ವ್ಯವಸ್ಥೆಯು ಎಲ್ಲಾ ಕಡೆಯಿಂದಲೂ ದಾಳಿಗೆ ಒಳಗಾಗುತ್ತಿದೆ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement