ವಿಡಿಯೋ
ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ರಾಕೇಶ್ ಕಿಶೋರ್ ಹೆಸರಿನ ಹಿರಿಯ ವಕೀಲ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರತ್ತ ಶೂ ಎಸೆಯಲು ಪ್ರಯತ್ನಿಸಿದ್ದರು.
ಇದಕ್ಕಾಗಿ ಹಿರಿಯ ವಕೀಲ ರಾಕೇಶ್ ಕಿಶೋರ್ ಅವರನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ ವಜಾಗೊಳಿಸಿತ್ತು.
ಈ ಬಗ್ಗೆ ಮಂಗಳವಾರ ಮಾತನಾಡಿದ ರಾಕೇಶ್ ಕಿಶೋರ್, ನಾನು ಮಾಡಿದ್ದ ಕಾರ್ಯಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ. ನಾನು ಮಾಡಿದ್ದು ಸರಿಯಿದೆ ಎಂದು ಹೇಳಿದ್ದಾರೆ.
ದೇವರು ನನ್ನನ್ನು ಹಾಗೆ ಮಾಡಲು ಪ್ರಚೋದಿಸಿದನು ಎಂದು ಅವರು ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ. ಪೂರ್ಣ ವಿಡಿಯೋ ಇಲ್ಲಿದೆ ನೋಡಿ.
Advertisement