ವಿಡಿಯೋ
ಮೈಸೂರಿನ ಮಾಜಿ ಸಂಸದ ಪ್ರತಾಪ ಸಿಂಹ ಹಾಗೂ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತಮ್ಮ ಸ್ಥಾನಗಳನ್ನು ಮರೆತು ಪರಸ್ಪರ ಏಕವಚನದಲ್ಲೇ ಬೈದಾಡಿಕೊಳ್ಳುತ್ತಿದ್ದಾರೆ.
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್ ಪ್ರದೀಪ್ ಈಶ್ವರ್.
ನಮ್ಮ ತಂದೆ ವಯಸ್ಸಿನಲ್ಲಿ ಇದ್ದಾಗ ಚಿಕ್ಕಬಳ್ಳಾಪುರ ಕಡೆ ಬಂದಿದ್ರೆ ನೀನು ಸುಂದರವಾಗಿ ಹುಟ್ಟುತ್ತಿದ್ದೆ. ನನ್ನ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಬೇಕು ಮಗನೆ ಎಂದು ಏಕವಚನದಲ್ಲೇ ಕಿಡಿ ಕಾರಿದ್ದರು.
ಈ ಬಗ್ಗೆ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಪ್ರದೀಪ್ ಈಶ್ವರ್, ಪ್ರತಾಪ್ ಸಿಂಹ, ನೀನು ನನ್ನ ತಾಯಿ ಮಂಜುಳಾ ಅವರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement