ವಿಡಿಯೋ
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ನಗರದಲ್ಲಿ ಪ್ರಸ್ತಾವಿತ ಸುರಂಗ ರಸ್ತೆ ಯೋಜನೆಯನ್ನು ಕೈಬಿಡುವಂತೆ ಮನವಿ ಮಾಡಿದರು.
ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮೆಟ್ರೋ ಮತ್ತು ಉಪನಗರ ರೈಲು ಜಾಲಗಳ ವಿಸ್ತರಣೆ ಮಾಡಬೇಕು ಎಂದು ತೇಜಸ್ವಿ ಸೂರ್ಯ ಪ್ರತಿಪಾದಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಎಷ್ಟು ಜನರು ಬಸ್‌ಗಳಲ್ಲಿ ಪ್ರಯಾಣಿಸುತ್ತಾರೆ.
ಈಗ, ಒಂದೇ ಮನೆಯಲ್ಲಿರುವ ಗಂಡ ಮತ್ತು ಹೆಂಡತಿ ಪ್ರತ್ಯೇಕವಾಗಿ ತಮ್ಮ ಸ್ವಂತ ವಾಹನಗಳಲ್ಲಿ ಪ್ರಯಾಣಿಸಲು ಬಯಸುತ್ತಾರೆ.
ಮದುವೆಯಾಗುವ ಹುಡುಗನ ಬಳಿ ಕಾರು ಇಲ್ಲದಿದ್ದರೆ ಹುಡುಗಿ ಮನೆಯವರು ಮದುವೆ ಪ್ರಸ್ತಾಪವನ್ನೇ ತಿರಸ್ಕರಿಸುತ್ತಾರೆ.
ಇದು ಸಂಸದ ತೇಜಸ್ವಿ ಸೂರ್ಯ ಅವರಿಗೆ ತಿಳಿದಿಲ್ಲದ ಸಾಮಾಜಿಕ ವಾಸ್ತವ ಎಂದು ಶಿವಕುಮಾರ್ ಸುರಂಗ ಯೋಜನೆಯನ್ನು ಸಮರ್ಥಿಸಿಕೊಂಡು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement