ವಿಡಿಯೋ
ಭಯೋತ್ಪಾದನೆ ಜಾಗತಿಕ ಶಾಂತಿಗೆ ಮತ್ತು ಭದ್ರತೆಗೆ ಅತಿದೊಡ್ಡ ಬೆದರಿಕೆಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯದ್ದೇಶಿಸಿ ಮೋದಿ ಮಾತನಾಡಿದರು.
ಭಯೋತ್ಪಾದನೆಯಲ್ಲಿ ದ್ವಿಮುಖ ಧೋರಣೆ ವಿರುದ್ಧ ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಪ್ರಧಾನಿ ಹೇಳಿದರು.
ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ನೇರವಾಗಿ ಹೆಸರಿಸದೆ,
"ಕೆಲವು ದೇಶಗಳು ಭಯೋತ್ಪಾದನೆಗೆ ಬಹಿರಂಗ ಬೆಂಬಲ ನೀಡುವುದನ್ನು" ಸಹಿಸಬಹುದೇ ಎಂದು ಮೋದಿ ಪ್ರಶ್ನಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement