ವಿಡಿಯೋ
ಮೈಸೂರು ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಹಿರಿಯ ಸಾಹಿತಿ, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಚಾಲನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ದಸರಾ ಉದ್ಘಾಟನೆ ಅತಿಥಿ ಸಾಹಿತಿ ಬಾನು ಮುಷ್ತಾಕ್ ಅವರು ಸೋಮವಾರ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಅನಂತರ ಬೆಳಿಗ್ಗೆ 10.10 ರಿಂದ 10.40 ರ ನಡುವೆ ಚಾಮುಂಡೇಶ್ವರಿ ದೇವಾಲಯದ ಹೊರಗೆ ಸ್ಥಾಪಿಸಲಾದ ವೇದಿಕೆಯಲ್ಲಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾ ಮಹೋತ್ವವನ್ನು ಉದ್ಘಾಟಿಸಿದರು.
ಅವರ ಜೊತೆ ಸಿಎಂ ಸಿದ್ದರಾಮಯ್ಯ, ಸಚಿವ ಹೆಚ್ ಸಿ ಮಹದೇವಪ್ಪ, ಶಿವರಾಜ್ ತಂಗಡಗಿ, ಮೈಸೂರು ಜಿಲ್ಲಾಧಿಕಾರಿಗಳು, ಶಾಸಕರು ಹಾಜರಿದ್ದರು. ವಿಡಿಯೋ ಇಲ್ಲಿದೆ ನೋಡಿ.
Advertisement