ವಿಡಿಯೋ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುರುವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಡಾ ಎಸ್ ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದು ಪಾರ್ಥಿವ ಶರೀರಕ್ಕೆ ನಮಿಸಿದರು.
ಅನಂತರ ಭೈರಪ್ಪನವರ ಕುಟುಂಬಸ್ಥರೊಂದಿಗೆ ಕೆಲ ಹೊತ್ತು ಸಿಎಂ ಮಾತುಕತೆ ನಡೆಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ, ನಾಡಿನ ಹಿರಿಯ ಸಾಹಿತಿ ಸರಸ್ವತಿ ಸಮ್ಮಾನ್, ಪದ್ಮ ವಿಭೂಷಣ ಡಾ ಎಸ್ ಎಲ್ ಭೈರಪ್ಪನವರ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಭೈರಪ್ಪ ಅವರು ಹೆಚ್ಚು ಸಮಯಗಳ ಕಾಲ ಮೈಸೂರಿನಲ್ಲಿಯೇ ಇದ್ದರು. ಮೈಸೂರು ಅವರ ನೆಚ್ಚಿನ ಸ್ಥಳ, ಹೀಗಾಗಿ ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಿಸಲಾಗುವುದು ಎಂದರು. ವಿಡಿಯೋ ಇಲ್ಲಿದೆ ನೋಡಿ.
Advertisement