ವಿಡಿಯೋ
ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟ್‌ನಲ್ಲಿ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮೃತರನ್ನು ರಾಘವೇಂದ್ರ (37), ರಾಜು (30) ಮತ್ತು ಶಬ್ಬೀರ್ (40) ಎಂದು ಗುರುತಿಸಲಾಗಿದ್ದು, ಎಲ್ಲರೂ ಸ್ಥಳದಲ್ಲಿ ಗೋಡೆ ನಿರ್ಮಾಣ ಕೆಲಸದಲ್ಲಿ ತೊಡಗಿದ್ದರು.
ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟ್‌ನ ಹೇರ್ ಪಿನ್ ತಿರುವಿನಲ್ಲಿ ಗುರುವಾರ ಮಧ್ಯಾಹ್ನ ಕಾರ್ಮಿಕರು ಕುಂದಾಪುರ-ಶಿವಮೊಗ್ಗ ಮಾರ್ಗದಲ್ಲಿ ರಸ್ತೆ ಸಂಬಂಧಿತ ಕೆಲಸದಲ್ಲಿ ತೊಡಗಿದ್ದಾಗ ಈ ಘಟನೆ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement