ವಿಡಿಯೋ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ ಶಮನ ಆಗಿಲ್ಲ.
ಸಮರ್ಥ್ ಅವರನ್ನು ಸೋಲಿಸಲು ವಿರೋಧ ಪಕ್ಷದ ಮುಖಂಡರ ಜೊತೆಗೆ ಕಾಂಗ್ರೆಸ್ ಪಕ್ಷದ ಮುಖಂಡರು ಪ್ರಯತ್ನ ನಡೆಸಿದ್ದಾರೆ ಎಂದು ಆರೋಪ ಕೇಳಿ ಬಂದಿತ್ತು.
ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ.
ಈ ನಡುವೆ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ರಾಜಿನಾಮೆ ನೀಡಿದ್ದಾರೆ.
ಈಮಧ್ಯೆ, ಸಿಎಂ ಸೂಚನೆ ಮೇರೆಗೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿಯಾಗಿದ್ದರು.
ಈ ಎಲ್ಲಾ ಬೆಳವಣಿಗೆಗಳ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement