ವಿಡಿಯೋ
ಪ್ರಧಾನಿ ನರೇಂದ್ರ ಮೋದಿಯವರು ಇದೇ ಮೊದಲ ಬಾರಿಗೆ ನಾಳೆ ಬುಧವಾರ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಗೆ ಆಗಮಿಸಲಿದ್ದಾರೆ.
ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಇಡೀ ಆದಿಚುಂಚನಗಿರಿ ಕ್ಷೇತ್ರ ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ.
ಆದಿಚುಂಚನಗಿರಿ ಮಠದ 71ನೇ ಪೀಠಾಧಿಪತಿ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆ ಇರುವ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಏ.15ರಂದು ಲೋಕಾರ್ಪಣೆಗೊಳಿಸಲಿದ್ದಾರೆ.
ಈ ವೇಳೆ ಪ್ರಧಾನಿ ಮೋದಿ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಧರಿಸುತ್ತಿದ್ದ ಮಾದರಿಯ ಪೇಟವನ್ನ ಉಡುಗೊರೆಯಾಗಿ ನೀಡಲು ಸಿದ್ಧತೆ ನಡೆದಿದೆ.
ಬನಾರಸ್ ಸೀರೆ, ಮೋಲ್ಡ್ ಬಳಸಿ ಪೇಟ ತಯಾರಿಸಲಾಗಿದೆ. ಕಲಾವಿದ ನಂದನ್ ಸಿಂಗ್ ಅವರು ಈ ಪೇಟವನ್ನು ಸಿದ್ಧಗೊಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement