ವಿಡಿಯೋ
ಪ್ರಧಾನಿ ನರೇಂದ್ರ ಮೋದಿಯವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿರುವ ಆದಿಚುಂಚನಗಿರಿ ಮಠದ 71ನೇ ಪೀಠಾಧಿಪತಿ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆ ಇರುವ ಗುರು ಭೈರವೈಕ್ಯ ಮಂದಿರವನ್ನು ಬುಧವಾರ ಲೋಕಾರ್ಪಣೆಗೊಳಿಸಿದರು.
ಪ್ರಧಾನಿಯವರ ರಾಜ್ಯ ಭೇಟಿಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ, ನಾವು ಪ್ರಧಾನಿ ಮೋದಿ ಅವರಿಂದ ಹಲವು ಯೋಜನೆಗಳಿಗೆ ಆರ್ಥಿಕ ನೆರವು ಕೇಳುತ್ತಿದ್ದೇವೆ.
ಆದರೆ ಅವರು ಅದರ ಬಗ್ಗೆ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಅವರ ಲಾಭಕ್ಕಾಗಿ ಮಾತ್ರ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement