Watch | ಇದು ನೋಟು ರದ್ದತಿಗೆ ಸಮ; ಕ್ಷೇತ್ರ ಪುನರ್ವಿಂಗಡಣೆ ಮಾಡಬೇಡಿ: ಶಶಿ ತರೂರ್

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್‌ವಿಂಗಡನೆ (ಡೆಲಿಮಿಟೇಶನ್) ಸಂಬಂಧಿಸಿದ ಮಸೂದೆಗಳ ಕುರಿತು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು “ನಾರಿ ಶಕ್ತಿ”ಯನ್ನು ನೀಡಿದ್ದೇವೆ ಎಂದು ಹೇಳಿದರೂ, ಅದನ್ನು “ಮುಳ್ಳಿನ ತಂತಿಯಲ್ಲಿ ಸುತ್ತಿ ನೀಡಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಲೋಕಸಭೆಯಲ್ಲಿ ಚರ್ಚೆಯ ವೇಳೆ ಮಾತನಾಡಿದ ತರೂರ್ ಅವರು, ಮಹಿಳಾ ಮೀಸಲಾತಿಗೆ ದೇಶಾದ್ಯಂತ ವ್ಯಾಪಕ ರಾಜಕೀಯ ಒಪ್ಪಿಗೆ ಇದ್ದರೂ, ಅದನ್ನು ಜಾರಿಗೆ ತರಲು ಡೆಲಿಮಿಟೇಶನ್ ಪ್ರಕ್ರಿಯೆಯೊಂದಿಗೆ ಜೋಡಿಸಿರುವುದೇಕೆ ಎಂದು ಪ್ರಶ್ನಿಸಿದರು.

ಇದೇ ವೇಳೆ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಯು "ರಾಜಕೀಯ ನೋಟು ಅಮಾನ್ಯೀಕರಣ"ವಾಗಿ ಪರಿಣಮಿಸುತ್ತದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com