ವಿಡಿಯೋ
ಶ್ವಾಸಕೋಶದ ಸೋಂಕಿನಿಂದಾಗಿ ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್ ಅನಾರೋಗ್ಯಕ್ಕೆ ಒಳಗಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಿ ಸುಧಾಕರ್ ಅವರ ಆರೋಗ್ಯ ವಿಚಾರಿಸಲು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿ ವೈದ್ಯಾಧಿಕಾರಿಗಳಿಂದ ಶನಿವಾರ ಮಾಹಿತಿ ಪಡೆದರು.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕೃಷ್ಣ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಕಿಮ್ಸ್) ಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಸಿದ್ದರಾಮಯ್ಯ ಮಾತನಾಡಿದರು.
"ಸುಧಾಕರ್ ಗೆ ಇನ್ನೂ ಪ್ರಜ್ಞೆ ಮರಳಿಲ್ಲ. ಅವರು ಇನ್ನೂ ತೀವ್ರ ನಿಗಾ ಘಟಕದಲ್ಲಿದ್ದಾರೆ. ವೈದ್ಯರು ನಾಳೆ ನಿರ್ಧಾರ ತೆಗೆದುಕೊಳ್ಳುತ್ತಾರೆ" ಎಂದು ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement