ವಿಡಿಯೋ
ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ವಿಚಾರಣೆ ಎದುರಿಸುತ್ತಿರುವ ದೆಹಲಿ ಮಾಜಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತೊಂದು ತಗಾದೆ ತೆಗೆದಿದ್ದಾರೆ.
ಈ ಹಿಂದೆ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಪೀಠ ಈ ವಿಚಾರಣೆ ನಡೆಸುವುದನ್ನು ಆಕ್ಷೇಪಿಸಿದ್ದ ಅರವಿಂದ್ ಕೇಜ್ರಿವಾಲ್ ಹಿನ್ನಡೆ ಅನುಭವಿಸಿದ್ದರು.
ಆಗ ತೀರ್ಪು ಕೊಟ್ಟಿದ್ದ ಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ನೇತೃತ್ವದಲ್ಲಿಯೇ ವಿಚಾರಣೆ ನಡೆಸುವುದಾಗಿ ಘೋಷಣೆ ಮಾಡಿತ್ತು.
ಈಗ ಇಷ್ಟು ದಿನಗಳ ಬಳಿಕ ಕೇಜ್ರಿವಾಲ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿಚಾರಣೆಯನ್ನು ವಿರೋಧಿಸಿ ಸತ್ಯಾಗ್ರಹ ಕೂರುವುದಾಗಿ ಬೆದರಿಕೆ ಹಾಕಿದ್ದಾರೆ.
ಈ ಕುರಿತು ಕೇಜ್ರಿವಾಲ್ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರಿಗೆ ಔಪಚಾರಿಕ ಪತ್ರ ಬರೆದು, ಅಬಕಾರಿ ಪ್ರಕರಣದ ವಿಚಾರಣೆ ಸಂಬಂಧ ಅವರ ಪೀಠದ ಮುಂದೆ ಇನ್ನು ಮುಂದೆ ತಾವು ಭಾಗವಹಿಸುವುದಿಲ್ಲ ಎಂದು ಘೋಷಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement