ವಿಧಾನಸೌಧದಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಗೋಡೆ ಕುಸಿತ ಘಟನೆಗೆ ಸಂಬಂಧಿಸಿದಂತೆ ಕಾರ್ಯನಿರ್ವಾಹಕ ಎಂಜಿನಿಯರ್‌ರನ್ನು ತಕ್ಷಣ ಅಮಾನತುಗೊಳಿಸುವಂತೆ ಆದೇಶಿಸಿದ್ದಾರೆ.
ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಿಬಿಎಂಪಿ ಆಯುಕ್ತರು ಭಾಗವಹಿಸಿದ್ದರು.
ಈ ಘಟನೆಯಲ್ಲಿ 6 ವರ್ಷದ ಮಗು ಸೇರಿ ಒಟ್ಟು 7 ಮಂದಿ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ದುರ್ಘಟನೆಯಲ್ಲಿ ಬೆಂಗಳೂರು ಮೂಲದವರು ಮಾತ್ರವಲ್ಲದೆ, ಕೇರಳದ ಪ್ರವಾಸಿಗರು ಹಾಗೂ ಅಂತರರಾಜ್ಯ ಕಾರ್ಮಿಕರು ದಾರುಣ ಸಾವನ್ನಪ್ಪಿದ್ದಾರೆ.
ಜಿಬಿಎ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿದ ನಂತರ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿದರು.
ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲು ಸಿಎಂ ಆದೇಶಿಸಿದ್ದಾರೆ. ತನಿಖಾ ವರದಿ ಸಲ್ಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement