ವಿಡಿಯೋ
ರಾಜ್ಯಸಭೆ ಕಲಾಪದ ವೇಳೆ ಮಂಗಳವಾರ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಯೋಧ್ಯೆ ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣ ಪ್ರಸ್ತಾಪಿಸಿದರು.
ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣದಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸ್ ಕ್ರಮದ ಕುರಿತು ಕೇಂದ್ರವು ಸಂಸತ್ತಿನಲ್ಲಿ ಉತ್ತರಗಳನ್ನು ನೀಡಬೇಕೆಂದು ಖರ್ಗೆ ಒತ್ತಾಯಿಸಿದರು.
ರಾಮಮಂದಿರದ ದೇಣಿಗೆ ಕಳ್ಳತನದ ಆರೋಪ ಹಾಗೂ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ವಿರುದ್ಧದ ಪೊಲೀಸ್ ಕ್ರಮದ ಕುರಿತಾದ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಮೂಲಕ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತನ್ನು ಅವಮಾನಿಸುತ್ತಿದ್ದಾರೆ ಅಥವಾ ಭಯಭೀತರಾಗಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ವಿಡಿಯೋ ಇಲ್ಲಿದೆ ನೋಡಿ.