ವಿಡಿಯೋ
ಸ್ವಾತಂತ್ರ್ಯೋತ್ಸವ ಅಂಗವಾಗಿ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನಲ್ಲಿ ಆಗಸ್ಟ್ 6ರಿಂದ 17ರವರೆಗೆ 220ನೇ ಫಲಪುಷ್ಪ ಪ್ರದರ್ಶನ ನಡೆಯಲಿದೆ.
ಈ ಬಾರಿ ತೋಟಗಾರಿಕೆ ಇಲಾಖೆಯಿಂದ ಕರ್ನಾಟಕದ ಮೊದಲ ರಾಜಮನೆತನಗಳಲ್ಲೊಂದಾದ ಗಂಗರ ಸಾಮ್ರಾಜ್ಯದ ವೈಭವವನ್ನು ಅನಾವರಣಗೊಳಿಸಲಾಗಿದೆ.
ಸುಮಾರು 1,200 ವರ್ಷಗಳ ಇತಿಹಾಸ ಹೊಂದಿರುವ ಬೇಗೂರಿನ ಪಂಚಲಿಂಗೇಶ್ವರ ದೇವಾಲಯ ಈ ವರ್ಷದ ಕೇಂದ್ರಬಿಂದುವಾಗಿದೆ.
ಗಂಗ ಸಾಮ್ರಾಜ್ಯದ ಇತಿಹಾಸ, ಕಲೆ, ಸಂಸ್ಕೃತಿ ಮತ್ತು ಶೌರ್ಯವನ್ನು ಪ್ರತಿಬಿಂಬಿಸುವ ಹಲವು ಕಲಾಕೃತಿಗಳು ಈ ಬಾರಿ ಹೂಗಳ ಮೂಲಕ ರೂಪುಗೊಂಡಿವೆ. ವಿಡಿಯೋ ಇಲ್ಲಿದೆ ನೋಡಿ.