ವಿಡಿಯೋ
ಕರ್ನಾಟಕದ ರಾಜಕೀಯ ಹೊಲಸು ಮಾಡಿದ್ದೇ ಸಿದ್ದರಾಮಯ್ಯ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಶುಕ್ರವಾರ ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಮಗನನ್ನು ಮಂತ್ರಿ ಮಾಡಲು ಮಲ್ಲಿಕಾರ್ಜುನ ಖರ್ಗೆ ಆ ಭಾಗದ ಎಲ್ಲಾ ಕಾಂಗ್ರೆಸ್ ನಾಯಕರ ರಾಜಕೀಯ ಮುಗಿಸಿದರು.
ಮೈಸೂರು ಭಾಗದಲ್ಲಿ ಮಗನನ್ನು ಲೀಡರ್ ಮಾಡಲು ಸಿದ್ದರಾಮಯ್ಯ ಎಲ್ಲಾ ಕಾಂಗ್ರೆಸ್ ನಾಯಕರ ರಾಜಕೀಯ ಮುಗಿಸಿದ್ದಾರೆ.
ಡಾ. ಮಹದೇವಪ್ಪ, ಕೆ.ವೆಂಕಟೇಶ್ ಎಲ್ಲರನ್ನು ಸಿದ್ದರಾಮಯ್ಯ ಮೂಲೆ ಗುಂಪು ಮಾಡಿದ್ದಾರೆ. ಸಭ್ಯ ರಾಜಕಾರಣಿ ತನ್ವೀರ್ ಸೇಠ್‌ಗೆ ಅವಕಾಶ ತಪ್ಪಿಸಿದ್ದಾರೆ ಎಂದು ಟೀಕಿಸಿದರು. ವಿಡಿಯೋ ಇಲ್ಲಿದೆ ನೋಡಿ.