ವಿಡಿಯೋ
ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎನ್ನಲಾದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಮುಡ್ರಂಗಡಿಯ ಸೇಂಟ್ ಕ್ಸೇವಿಯರ್ಸ್ ಚರ್ಚ್ ಆವರಣದಲ್ಲಿ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಡಿಸೋಜಾ ಅವರು ತಮ್ಮ ವಾಹನದ ಚಾಲಕನ ಬದಿಯ ಬಾಗಿಲಿನತ್ತ ತೆರಳುತ್ತಿದ್ದ ವೇಳೆ, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಲ್ಲಿ ಒಬ್ಬಾತ ಪಿಸ್ತೂಲ್‌ನಿಂದ ಅವರ ತಲೆಗೆ ಗುಂಡು ಹಾರಿಸಿದ್ದಾನೆ. ವಿಡಿಯೋ ಇಲ್ಲಿದೆ ನೋಡಿ.