ವಿಡಿಯೋ
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಬೆಂಗಳೂರು ಸ್ಟಾರ್ ಹೋಟೆಲ್‌ಗಳ ಮೇಲಿನ ದಾಳಿಯನ್ನು ಮೂರನೇ ದಿನವೂ ಮುಂದುವರಿಸಿದ್ದಾರೆ.
ಭಾನುವಾರ ರಾತ್ರಿ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಒಟ್ಟಾರೆ 132 ಕೆ.ಜಿ. ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.
ಯುಬಿ ಸಿಟಿ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿರುವ ಪ್ರತಿಷ್ಠಿತ ಪಂಚತಾರ ಹೋಟೆಲ್‌ಗಳಲ್ಲಿ ಪರಿಶೀಲಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಒಟ್ಟಾರೆ 132 ಕೆ.ಜಿ. ಆಹಾರ ಪದಾರ್ಥ ಹಾಗೂ ಬಳಸಿದ ಅಡುಗೆ ಎಣ್ಣೆ 15 ಲೀಟರ್ ಜಪ್ತಿ ಮಾಡಲಾಗಿದೆ ಎಂದು ಇಲಾಖೆಯು ತಿಳಿಸಿದೆ. ವಿಡಿಯೋ ಇಲ್ಲಿದೆ ನೋಡಿ.