ವಿಡಿಯೋ
ಜಾರ್ಖಂಡ್ ಪಬ್ಲಿಕ್ ಸರ್ವಿಸ್ ಕಮಿಷನ್ (JPSC) ಮತ್ತು ಜಾರ್ಖಂಡ್ ಸ್ಟಾಫ್ ಸೆಲೆಕ್ಷನ್ ಕಮಿಷನ್ (JSSC) ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮ ಮತ್ತು ಪೇಪರ್‌ಲೀಕ್ ಆರೋಪಗಳ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ತೀವ್ರಗೊಂಡಿದೆ.
ಪ್ರತಿಭಟನೆಯ 16 ನೇ ದಿನವಾದ ಇಂದು ಸೋಮವಾರ ಜಾರ್ಖಂಡ್‌ನ ವಿವಿಧ ಜಿಲ್ಲೆಗಳಿಂದ ರಾಂಚಿಗೆ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ವಿದ್ಯಾರ್ಥಿಗಳು ವಿಧಾನಸಭಾ ಚಲೋ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ.
ವಿದ್ಯಾರ್ಥಿ ನಾಯಕ ದೇವೇಂದ್ರ ನಾಥ್ ಮಹ್ತೊ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ಅವರ ಭಾವಚಿತ್ರವನ್ನು ಹಿಡಿದುಕೊಂಡು ಆಂಬ್ಯುಲೆನ್ಸ್‌ನಲ್ಲಿ ಮೆರವಣಿಗೆಯಲ್ಲಿ ಸೇರಿಕೊಂಡರು. ವಿಡಿಯೋ ಇಲ್ಲಿದೆ ನೋಡಿ.