ವಿಡಿಯೋ
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆಯಾಗಿದೆ.
ಮಂಗಳವಾರ ಸಿಸಿಬಿ ಅಧಿಕಾರಿಗಳು ನಡೆಸಿದ ದಿಢೀರ್ ಪರಿಶೀಲನೆ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿಯಾಗಿರುವ ಪ್ರಜ್ವಲ್ ಗೆ ಜೈಲಿನಲ್ಲಿ ವಿಐಪಿ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಪುಷ್ಟಿ ನೀಡಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕಠಿಣ ಕ್ರಮ ಕೈಗೊಳ್ಳುತ್ತೇವೆ. ಯಾರಿಗೂ ವಿಐಪಿ ಸೌಲಭ್ಯ ನೀಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.