Watch | PSIಗೆ ಕಪಾಳಮೋಕ್ಷ: ಮಗಳ ವರ್ತನೆಗೆ ಬಿಜೆಪಿ ಶಾಸಕ ಸುರೇಶ್‌ ಗೌಡ ಕ್ಷಮೆಯಾಚನೆ

ಕರ್ತವ್ಯದಲ್ಲಿದ್ದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ (ಪಿಎಸ್‌ಐ) ತಮ್ಮ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ. ಸುರೇಶ್‌ ಗೌಡ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್‌ ಗೌಡ ಅವರು, ಮಗಳು ಆ ಕ್ಷಣದಲ್ಲಿ ತಾಳ್ಮೆ ಕಳೆದುಕೊಂಡಿರಬಹುದು. ಆದರೆ, ಸಾರ್ವಜನಿಕ ಜೀವನದಲ್ಲಿರುವವರು ಇಂತಹ ವರ್ತನೆ ತೋರಬಾರದು ಎಂದು ಹೇಳಿದ್ದಾರೆ.

ಈ ಸಂಬಂಧ ಪಿಎಸ್‌ಐ ಸವಿತಾ ಅವರು ನೀಡಿದ ದೂರಿನ ಆಧಾರದ ಮೇಲೆ ಶ್ರೀರಂಗಪಟ್ಟಣ ತಾಲೂಕಿನ ಕ್ಯಾತನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಐಶ್ವರ್ಯಾ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com