ವಿಡಿಯೋ
ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನುಬದ್ಧವಾಗಿ ನಡೆಸಲು ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ.
ಈ ಸಂಬಂಧ ‘ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026’ಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಪ್ರಸ್ತಾವಿತ ಶಾಸನವು ಆರ್‌ಎಸ್‌ಎಸ್ ಅನ್ನು ಗುರಿಯಾಗಿರಿಸಿಕೊಂಡಿಲ್ಲ, ಇದು ಕಾಂಗ್ರೆಸ್ ಪಕ್ಷ ಸೇರಿದಂತೆ ಎಲ್ಲಾ ಸಂಸ್ಥೆಗಳಿಗೆ ಅನ್ವಯಿಸುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಈ ನಿರ್ಧಾರವು ಆರ್‌ಎಸ್‌ಎಸ್ ಅನ್ನು ಗುರಿಯಾಗಿಸುವ ಸ್ಪಷ್ಟ ಪ್ರಯತ್ನವಾಗಿದೆ. ಈ ಮಸೂದೆ ಕಾಯಿದೆಯಾದಾಗ ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.