ವಿಡಿಯೋ
ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ತಮ್ಮ ತಾಯಿಯ ಜನ್ಮದಿನದ ನೆಪದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಈಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ನಾಟಕ ಪ್ರದರ್ಶನ ವೇಳೆ ಸರ್ಕಾರಿ ಆಸ್ಪತ್ರೆಯನ್ನು ದುರ್ಬಳಕೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಆಸ್ಪತ್ರೆಯಲ್ಲಿದ್ದ ಕೊಠಡಿಗಳನ್ನು ನಾಟಕ ಅಭಿನಯಿಸಲು ಬಂದಿದ್ದ ಮಹಿಳಾ ಪಾತ್ರಧಾರಿಗಳಿಗೆ 'ಮೇಕಪ್ ಕೊಠಡಿ'ಗಳನ್ನಾಗಿ ಪರಿವರ್ತಿಸಲಾಗಿತ್ತು.
ಈ ಕುರಿತು ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಯುಟಿ ಖಾದರ್, ಅದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತೇವೆ; ರೀಲ್ ನೋಡಿ ನಾವು ನಿರ್ಧರಿಸಬಾರದು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.