ವಿಡಿಯೋ
ಉತ್ತರ ನೇಪಾಳದ ರಸುವಾ ಜಿಲ್ಲೆಗೆ ಬುಧವಾರ ಬೆಳಿಗ್ಗೆ ಅಪ್ಪಳಿಸಿದ ಭೀಕರ ಪ್ರವಾಹವು ವ್ಯಾಪಕ ವಿನಾಶ ಉಂಟು ಮಾಡಿದೆ.
ನದಿಗಳ ಮೇಲೆ ನಿರ್ಮಿಸಲಾದ ಸೇತುವೆಗಳು ಮತ್ತು ಮನೆಗಳನ್ನು ಪ್ರವಾಹಕ್ಕೆ ಕೊಚ್ಚಿ ಹೋಗಿದೆ.
ಇಲ್ಲಿಯವರೆಗೆ ಸಾವನ್ನಪ್ಪಿದವರ ಸಂಖ್ಯೆ 95ಕ್ಕೆ ಏರಿದ್ದು, 291 ವಿದೇಶಿಯರು ಮತ್ತು 93 ನೇಪಾಳಿ ಪ್ರಜೆಗಳು ಸೇರಿ ಒಟ್ಟು 384 ಪ್ರಯಾಣಿಕರು ನಾಪತ್ತೆಯಾಗಿದ್ದಾರೆ.
ಕನಿಷ್ಠ 105 ಭಾರತೀಯರು ಮತ್ತು 37 ಅನಿವಾಸಿ ಭಾರತೀಯರು ನಾಪತ್ತೆಯಾದವರಲ್ಲಿ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚೀನಾದ ಟಿಬೆಟ್ ಪ್ರದೇಶದ ಭೋಟೆಕೋಶಿ ನದಿಯಲ್ಲಿ ಹಠಾತ್ ಉಕ್ಕಿ ಹರಿದ ಪರಿಣಾಮ ಈ ಭೀಕರ ಪ್ರವಾಹ ಉಂಟಾಗಿದೆ. ವಿಡಿಯೋ ಇಲ್ಲಿದೆ ನೋಡಿ.