ವಿಡಿಯೋ
ಅಮೆರಿಕಾದ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಕಾರ್ಯಕ್ರಮವನ್ನು ನ್ಯೂಯಾರ್ಕ್ ನಗರದ ಮೇಯರ್ ಜೋಹ್ರಾನ್ ಮಮ್ದಾನಿ ವಿರೋಧಿಸಿದ್ದಾರೆ.
ಆದರೆ RSS ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸಿರುವ ಅಮೆರಿಕದ ಖ್ಯಾತ ಗಾಯಕಿ ಮೇರಿ ಮಿಲ್ಬೆನ್ ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ವಿರುದ್ಧ ಕಿಡಿಕಾರಿದ್ದಾರೆ.
ಮಮ್ದಾನಿ ಮತ್ತು ಈ ಸಮಾಜವಾದಿ ಹುಚ್ಚರು ಮೋಹನ್ ಭಾಗವತ್ ಅವರ ಕಾರ್ಯಕ್ರಮವನ್ನು ವಿರೋಧಿಸುತ್ತಿದ್ದಾರೆ.
ಏಕೆಂದರೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ವಿರೋಧಿಸುತ್ತಾರೆ ಎಂದು ಮಿಲ್ಬೆನ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.