ವಿಡಿಯೋ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರು ಶುಕ್ರವಾರ ಸಂಜೆ ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದರೊಂದಿಗೆ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸದನದ ಒಳಗೆ ಮತ್ತು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಸಿದ್ದ ಬಿಜೆಪಿ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.
ಶುಕ್ರವಾರ ಮಧ್ಯಾಹ್ನ ದೆಹಲಿಯಿಂದ ಆಗಮಿಸಿದ ಬಳಿಕ ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ನಾಗೇಂದ್ರ ಮಾತನಾಡಿದರು.
ಮನುವಾದಿಗಳ ಕುತಂತ್ರದಿಂದ ನಾನು ಮೂರು ತಿಂಗಳು ಜೈಲಿಗೆ ಹೋಗಿದ್ದೆ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವಿಡಿಯೋ ಇಲ್ಲಿದೆ ನೋಡಿ.