ವಿಡಿಯೋ
ಒಂದೇ ಪ್ರಕರಣದಲ್ಲಿ ಎರಡು ಬಾರಿ ರಾಜೀನಾಮೆ ನೀಡಿದ ವ್ಯಕ್ತಿಯನ್ನು ನಾನು ಇದುವರೆಗೆ ನೋಡಿಲ್ಲ ಎಂದು ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ನಾಗೇಂದ್ರ ರಾಜೀನಾಮೆ ನೀಡಿದ ಬಗ್ಗೆ ಬಿಜೆಪಿ ನಾಯಕ ಬಿ. ಶ್ರೀರಾಮುಲು ಪ್ರತಿಕ್ರಿಯಿಸಿದರು.
ಬಳ್ಳಾರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ. ಶ್ರೀರಾಮುಲು, ಸೆಪ್ಟೆಂಬರ್ 1 ರಿಂದ ರಾಯಚೂರಿನಿಂದ ಬಳ್ಳಾರಿವರೆಗೆ 10 ದಿನಗಳ ಪಾದಯಾತ್ರೆಯನ್ನು ಬಿಜೆಪಿ ನಡೆಸಲಿದೆ ಎಂದು ತಿಳಿಸಿದರು.
25 ದಿನಗಳಲ್ಲಿ ಸಚಿವ ಸ್ಥಾನದಿಂದ ರಾಜೀನಾಮೆ ನೀಡುವಂತೆ ಮಾಡಿದ ಹೋರಾಟಕ್ಕಾಗಿ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಬಿ.ವೈ. ವಿಜಯೇಂದ್ರ ಮತ್ತು ಇತರ ನಾಯಕರಿಗೆ ಶ್ರೀರಾಮುಲು ಧನ್ಯವಾದ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.