ವಿಡಿಯೋ
ಮುಖ್ಯಮಂತ್ರಿ ಕುರ್ಚಿ ಗುದ್ದಾಟ ವಿಚಾರ ಸೋಮವಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು.
ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಮುಖ್ಯಮಂತ್ರಿ ಉತ್ತರ ನೀಡುವಾಗ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪಿಸಿದರು.
ಕಳೆದ ಒಂದು ತಿಂಗಳಿಂದ ಡಿ.ಕೆ. ಶಿವಕುಮಾರ್ ಅವರ ಮಾತು, ಟ್ವೀಟ್ ಗಳು ನೂರು ಅರ್ಥ ಬರುವಂತಿದ್ದು, ಎಲ್ಲರೂ ಗೊಂದಲಕ್ಕೆ ಒಳಗಾಗಿದ್ದಾರೆ. ಆ ಸಂದರ್ಭ ಯಾವಾಗ ಬರುತ್ತದೆ ಎಂಬುದನ್ನು ಸ್ಪಷ್ಪಪಡಿಸಬೇಕು ಎಂದರು.
ಈ ಮಾತಿಗೆ ಉತ್ತರಿಸಿದ ಡಿಕೆ ಶಿವಕುಮಾರ್, ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ಇಲ್ಲಿ ಎಲ್ಲವೂ ಸಾಧ್ಯ.
ದೃಢವಾದ ನಿಲುವು, ಸಂಕಲ್ಪ ಹೊಂದಿದ್ದರೆ, ಒಬ್ಬನೇ ಸಾಕು. ಆತನ ಜೊತೆ 140 ಜನರೂ ಇರುತ್ತಾರೆ, ಇನ್ನೂ ಜಾಸ್ತಿನೂ ಆಗುತ್ತಾರೆ. ನೋಡೋಣ 2028ರಲ್ಲಿ ಏನಾಗುತ್ತದೆ ಎಂದರು. ವಿಡಿಯೋ ಇಲ್ಲಿದೆ ನೋಡಿ.
Advertisement