ವಿಡಿಯೋ
Watch | 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿ ಇರ್ತಾರೆ! ಯತೀಂದ್ರನೇ ನಮ್ಮ ಹೈಕಮಾಂಡ್; ಹೇಳಿದ್ಮೇಲೆ ಮುಗೀತು!
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ ಎಂದು ಡಾ ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಶುಕ್ರವಾರ ಹೇಳಿದರು.
ರಾಜಕೀಯ ವಲಯದಲ್ಲಿ ಯಾವುದೇ ಚರ್ಚೆಗಳು ಆಗುತ್ತಿಲ್ಲ, ಅದು ಇತ್ಯರ್ಥವಾದ ವಿಷಯ.
ಹೈಕಮಾಂಡ್ ಕೂಡ ಕೆಲವರ ಬೇಡಿಕೆಗೆ ಮನ್ನಣೆ ಕೊಟ್ಟಿಲ್ಲ. ಹಾಗಾಗಿ ನನ್ನ ಪ್ರಕಾರ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಯತೀಂದ್ರ ಹೇಳಿದ್ದಾರೆ.
ಈ ಹೇಳಿಕೆ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಯತೀಂದ್ರ ಅವರೇ ನಮ್ಮ ಹೈಕಮಾಂಡ್; ಅವರು ಹೇಳಿದ್ಮೇಲೆ ಮುಗೀತು ಎಂದು ಮಾರ್ಮಿಕವಾಗಿ ನುಡಿದರು. ವಿಡಿಯೋ ಇಲ್ಲಿದೆ ನೋಡಿ.
