ವಿಡಿಯೋ
ಜಮ್ಮುಕಾಶ್ಮೀರದ ಕಿಶ್ತ್ವಾರ್‌ನ ಚತ್ರೂ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಆರಂಭಿಸಿದ್ದ ಆಪರೇಷನ್ ತ್ರಾಶಿ-I ಕಾರ್ಯಾಚರಣೆ ಯಶಸ್ವಿಯಾಗಿದೆ.
ಕಾರ್ಯಾಚರಣೆಯಲ್ಲಿ ಭದ್ರತಾಪಡೆಗಳು ಜೈಷ್-ಎ-ಮೊಹಮ್ಮದ್ ಸಂಘಟನೆಯ ಟಾಪ್ ಕಮಾಂಡರ್ ಸೈಫುಲ್ಲಾ ಸೇರಿದಂತೆ ಒಟ್ಟು ಏಳು ಉಗ್ರರನ್ನು ಸದೆಬಡಿದಿದೆ.
ಪೊಲೀಸ್, ಸಿಆರ್‌ಪಿಎಫ್ ಮತ್ತು ಸೇನೆಪಡೆಗಳು ಕಿಶ್ತ್ವಾರ್‌ನ ಛತ್ರೂ ಅರಣ್ಯದ ಪಾಸರ್‌ಕುಟ್ ಪ್ರದೇಶದಲ್ಲಿ ಆಪರೇಷನ್ ಟ್ರಾಶಿ-I ಕಾರ್ಯಾಚರಣೆ ಆರಂಭಿಸಿತ್ತು.
ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ಜೆಇಎಂ ಟಾಪ್ ಕಮಾಂಡರ್ ಸೈಫುಲ್ಲಾ ಸೇರಿದಂತೆ ಮೂವರು ಪಾಕಿಸ್ತಾನಿ ಉಗ್ರರನ್ನು ಹತ್ಯೆ ಮಾಡಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement