ವಿಡಿಯೋ
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷಾಚರಣೆಗಳು ಯಾವುದೇ ಪ್ರಮುಖ ಅಹಿತಕರ ಘಟನೆಗಳಿಲ್ಲದೆ ಶಾಂತಿಯುತವಾಗಿ ನಡೆದಿವೆ ಎಂದು ಗೃಹ ಸಚಿವ ಜಿ ಪರಮೇಶ್ವರ ಗುರುವಾರ ಹೇಳಿದರು.
ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ ಅವರು, ಜನರು ಹೊಸ ವರ್ಷವನ್ನು "ಜವಾಬ್ದಾರಿಯುತವಾಗಿ" ಆಚರಿಸಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.
ಕೆಲವು ಬೆಂಬಲಿಗರು ಜಿ. ಪರಮೇಶ್ವರ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಬೇಕೆಂದು ಒತ್ತಾಯಿಸುತ್ತಿರುವ ಕುರಿತು ಪರಮೇಶ್ವರ್ ಪ್ರತಿಕ್ರಿಯಿಸಿದರು.
ನನ್ನ ಟೀಮ್ ಅಂತ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement