ವಿಡಿಯೋ
ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನಗರದ ನಿವಾಸಿ ಹಾಗೂ ಆರ್‌ಎಸ್‌ಎಸ್ ಸದಸ್ಯರಾದ ತೇಜಸ್ ಎ ಅವರು ಸಲ್ಲಿಸಿದ ಖಾಸಗಿ ದೂರಿನ ಮೇರೆಗೆ ನ್ಯಾಯಾಲಯ ಮೂವರಿಗೆ ನೋಟಿಸ್ ಜಾರಿ ಮಾಡಿದೆ.
ದೂರಿನ ಬಗ್ಗೆ ತೇಜಸ್ ಅವರು ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಅವರೊಟ್ಟಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೂ ಸಹ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನೋಟಿಸ್ ನೀಡಿರುವ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement