ವಿಡಿಯೋ
ದೆಹಲಿಯ ರಾಮಲೀಲಾ ಮೈದಾನ ಪ್ರದೇಶದ ಸೈಯದ್ ಫೈಜ್ ಇಲಾಹಿ ಮಸೀದಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಈ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿ ಐದು ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಮಸೀದಿಗೆ ಹೊಂದಿಕೊಂಡಿರುವ ಭೂಮಿ ಮತ್ತು ಹತ್ತಿರದ ಸ್ಮಶಾನದಲ್ಲಿ ದೆಹಲಿ ಹೈಕೋರ್ಟ್ ಆದೇಶದ ಮೇರೆಗೆ ಧ್ವಂಸ ಕಾರ್ಯ ನಡೆಯುತ್ತಿತ್ತು.
ಈ ವೇಳೆ, ಕೆಲವು ಜನರು ಕಾರ್ಯಪಡೆಗಳ ಮೇಲೆ ಕಲ್ಲು ಮತ್ತು ಗಾಜಿನ ಬಾಟಲಿಗಳನ್ನು ಎಸೆದಿದ್ದರಿಂದ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement