ವಿಡಿಯೋ
ದಟ್ಟ ಮಂಜಿನಿಂದಾಗಿ, ಟೆಕ್ಕಿಯೊಬ್ಬರು ಕಾರು ಸಮೇತ 70 ಅಡಿ ಆಳದ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಸೆಕ್ಟರ್ 150 ರ ಬಳಿ, ಟೆಕ್ಕಿ ಯುವರಾಜ್ ಮೆಹ್ತಾ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.
ದಟ್ಟವಾದ ಮಂಜು ಮತ್ತು ಕಡಿಮೆ ಗೋಚರತೆಯಿಂದಾಗಿ ಕಾರು ನಿಯಂತ್ರಣ ತಪ್ಪಿ ರಸ್ತೆ ತಿರುವಿನ ಬಳಿ ಇರುವ ನೀರು ತುಂಬಿದ ನಿರ್ಮಾಣ ಗುಂಡಿಗೆ ಡಿಕ್ಕಿ ಹೊಡೆದಿದೆ.
ಕಾರು ಎರಡು ಗಂಟೆಗಳ ಕಾಲ ಕಾರು ನೀರಿನ ಮೇಲೆ ತೇಲುತ್ತಿತ್ತು. ಆದರೆ ಯಾರ ಕಣ್ಣಿಗೂ ಬೀಳಲಿಲ್ಲ.
ಕೂಡಲೇ ಟೆಕ್ಕಿ ತಮ್ಮ ತಂದೆಗೆ ಕರೆ ಮಾಡಿ, ಅಪ್ಪಾ ನನಗೆ ಸಾಯಲು ಇಷ್ಟವಿಲ್ಲ, ನಾನು ಹೀಗೆ ನೀರಿನಲ್ಲಿ ಬಿದ್ದಿದ್ದೇನೆ ಬಂದು ಕಾಪಾಡಿ ಎಂದು ಬೇಡಿಕೊಂಡಿದ್ದರು. ವಿಡಿಯೋ ಇಲ್ಲಿದೆ ನೋಡಿ.
Advertisement